newsics.com
ಕೊಚ್ಚಿ: ಕೇರಳದ ತ್ರಿಶ್ಯೂರ್ ಮೆಡಿಕಲ್ ಕಾಲೇಜಿ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸ್ವಪ್ನಾ ಸುರೇಶ್ ಜತೆ ಸೆಲ್ಫಿ ತೆಗೆದ ಮಹಿಳಾ ಪೊಲೀಸ್ ಅಧಿಕಾರಿಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ತನಿಖೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಎದೆ ನೋವಿನ ಹಿನ್ನೆಲೆಯಲ್ಲಿ ಚಿನ್ನ ಕಳ್ಳ ಸಾಗಾಟ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ತ್ರಿಶ್ಯೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿತ್ತು.
ಇದೀಗ ಸ್ವಪ್ನಾ ಸುರೇಶ್ ಅವರು ಗುಣಮುಖರಾಗಿದ್ದು, ಮಂಗಳವಾರ ಸಂಜೆ ಅವರನ್ನು ಡಿಸ್ಚಾರ್ಚ್ ಮಾಡಲಾಗಿದೆ. ಇಂದು ಸ್ವಪ್ನಾ ಸುರೇಶ್ ಆರೋಗ್ಯ ವರದಿಯನ್ನು ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಸಲ್ಲಿಸಲಿದ್ದಾರೆ.