Saturday, April 17, 2021

ATMನಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ಹಣ ಪಡೆದರೆ ಪ್ರತ್ಯೇಕ ಶುಲ್ಕ!

ಮುಂಬೈ: ಎಟಿಎಂಗಳಲ್ಲಿ ಇನ್ಮುಂದೆ ನೀವು ಐದು ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣ ಪಡೆದರೆ ಹೆಚ್ಚುವರಿ ಶುಲ್ಕ ಪಾವತಿಸಬೇಕಾದ ಸಂದರ್ಭ ಎದುರಾಗಬಹುದು.
ರಿಸರ್ವ್‌ ಬ್ಯಾಂಕ್‌ 2019ರ ಜೂನ್‌ನಲ್ಲಿ ನೇಮಕ ಮಾಡಿದ್ದ ಸಮಿತಿ ಈ ಶಿಫಾರಸು ಮಾಡಿದ್ದು, ಇದಲ್ಲದೆ, ಜನಸಂಖ್ಯೆ ಆಧಾರಿತವಾಗಿ ಎಟಿಎಂ ಇಂಟರ್‌ಚೇಂಜ್‌ ಶುಲ್ಕ ವಿಧಿಸಬೇಕು ಎಂದೂ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ಎಟಿಎಂ ನಿರ್ವಹಣೆಯ ಶುಲ್ಕ ಹೆಚ್ಚುತ್ತಿದ್ದು, ಅದರ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಈ ಶಿಫಾರಸನ್ನು ಆರ್‌ಬಿಐ ಅಂಗೀಕರಿಸಿದರೆ, ಎಟಿಎಂ ವ್ಯವಹಾರಗಳಿಗೆ ಗ್ರಾಹಕರು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ.
ನಗದು ವ್ಯವಹಾರಕ್ಕೆ ಕಡಿವಾಣ ಹಾಕಲು ಆರ್ಬಿಐ ನೇಮಿಸಿದ್ದ ಸಮಿತಿ ಈ ಶಿಫಾರಸು ಮಾಡಿದ್ದು, 5,000ಕ್ಕಿಂತ ಹೆಚ್ಚಿನ ಮೊತ್ತದ ಪ್ರತಿಯೊಂದು ವಹಿವಾಟಿಗೆ ಬ್ಯಾಂಕುಗಳು ಗ್ರಾಹಕರ ಮೇಲೆ ಶುಲ್ಕ ವಿಧಿಸಬಹುದು ಎಂದು ಸಮಿತಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!