Thursday, May 26, 2022

ಅಪಘಾತದಲ್ಲಿ ಕಮರಿ ಹೋದ ಏಳು ವೈದ್ಯಕೀಯ ವಿದ್ಯಾರ್ಥಿಗಳ ಕನಸು

Follow Us

newsics.com

ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಎಲ್ಲರೂ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ.

ಒಂದು ಅಪಘಾತ ಏಳು ಮಂದಿ ಯುವ ವೈದ್ಯರ ಜೀವ ಕಸಿದುಕೊಂಡಿದೆ.  ಬಿಜೆಪಿ ಶಾಸಕ   ವಿಜಯ ರಹಂಗ್ದಾಲ್ ಅವರ ಪುತ್ರ ಆವಿಷ್ಕಾರ್,  ನೀರಜ್ ಚೌಹಾಣ್,  ನಿತೇಶ್ ಸಿಂಗ್, ವಿವೇಕ್ ನಂದನ್ , ಪ್ರತ್ಯುಷ್ ಸಿಂಗ್, ಶುಭಂ ಜೈಸ್ವಾಲ್ ಮತ್ತು ಪವನ್ ಶಕ್ತಿ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.

ಮಧ್ಯ ರಾತ್ರಿ 1. 30ರ ಹೊತ್ತಿಗೆ ಈ ಅಪಘಾತ ನಡೆದಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ಕಾಡು ಪ್ರಾಣಿ  ರಸ್ತೆಗೆ ಅಡ್ಡ ಬಂದಾಗ ತಕ್ಷಣ  ಬ್ರೇಕ್ ಹಾಕಲಾಯಿತು. ಇದರಿಂದ  ಎಸ್ ಯು ವಿ ಕೆಳಗೆ ಉರುಳಿ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಹೋಲ್ಕರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!