Saturday, April 17, 2021

ಮಕ್ಕಳಿಗೆ ಲೈಂಗಿಕ ಕಿರುಕುಳ; ಸ್ವಾಮೀಜಿ ಬಂಧನ

ಮುಜಾಫರ್: ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಆರೋಪದ ಮೇಲೆ ಸುಕೇರ್ತಲ್‍ ಆಶ್ರಮದ ಮಾಲೀಕರಾದ ಸ್ವಾಮಿಭಕ್ತಿ ಭೂಷಣ ಗೋವಿಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವೈದ್ಯಕೀಯ ಪರೀಕ್ಷೆಯಲ್ಲಿ ನಾಲ್ಕು ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವುದು ಖಚಿತವಾಗಿದೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‍ನ ಅಮಿತ್‍ಕುಮಾರ್ ಅವರು ಮಕ್ಕಳ ವಿಚಾರಣೆ ನಡೆಸಿದ್ದಾರೆ.
ಮಿಜೋರಾಂ, ತ್ರಿಪುರ, ಅಸ್ಸಾಂನಿಂದ 7ರಿಂದ 10 ವರ್ಷ ವಯಸ್ಸಿನ ಮಕ್ಕಳನ್ನು ಕರೆತಂದು ಆಶ್ರಮದಲ್ಲಿ ಇರಿಸಿಕೊಳ್ಳಲಾಗಿತ್ತು. ಎಂಟು ಮಕ್ಕಳನ್ನು ರಕ್ಷಿಸಲಾಗಿದ್ದು, ಆಶ್ರಮದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಸ್ವಾಮಿಭಕ್ತಿ ಭೂಷಣನನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 323, 377, 504 ಮತ್ತು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
2008ರಿಂದಲೂ ಸುಕೇರ್ತಲ್‍ನಲ್ಲಿ ಆಶ್ರಮ ನಡೆಸುತ್ತಿರುವ ಸ್ವಾಮಿಭಕ್ತಿ ಭೂಷಣ ಗೋವಿಂದ ಮಹಾರಾಜ್ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿರುವುದಲ್ಲದೆ ಜೀತದಾಳುಗಳಾಗಿ ಕೆಲಸ ಮಾಡಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!