Saturday, April 17, 2021

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್

newsics.com
ನವದೆಹಲಿ:‌ ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ.
ಜೂನ್ 18ರಂದು ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಡಬ್ಲ್ಯುಟಿಸಿ ಫೈನಲ್ ಪಂದ್ಯ ಸೌತಾಂಪ್ಟನ್ʼನಲ್ಲಿ ನಡೆಯಲಿದೆ. ಸ್ಥಳ ಬದಲಾವಣೆ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಐಸಿಸಿ, ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್ ಆಗಿರುವುದನ್ನು ಖಚಿತಪಡಿಸಿದೆ.
ಸೌತಾಂಪ್ಟನ್ʼನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಪಾಲ್ಗೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ಗಂಗೂಲಿ ಹೇಳಿದ್ದಾರೆ.

 

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!