ಕೊಚ್ಚಿ: ಮೂವತ್ತು ಕಿಲೋ ಚಿನ್ನ ಕಳ್ಳ ಸಾಗಾಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾದಳ ಎನ್ ಐ ಎ ಇಂದು ಹಿರಿಯ ಐಎಎಸ್ ಅಧಿಕಾರಿ ಶಿವಶಂಕರ್ ಅವರನ್ನು ಮತ್ತೆ ವಿಚಾರಣೆಗೆ ಗುರಿಪಡಿಸಿದೆ. ಇದೀಗ ಮೂರನೆ ಬಾರಿ ಶಿವಶಂಕರ್ ಎನ್ ಐ ಎ ವಿಚಾರಣೆ ಎದುರಿಸುತ್ತಿದ್ದಾರೆ.
ಚಿನ್ನ ಕಳ್ಳ ಸಾಗಾಟದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮತ್ತು ಶಿವಶಂಕರ್ ಅವರನ್ನು ಎನ್ ಐ ಎ ಜತೆಯಲ್ಲಿ ವಿಚಾರಣೆ ನಡೆಸುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಸ್ವಪ್ನಾ ಸುರೇಶ್ ಅವರನ್ನು ಎನ್ ಐ ಎ ಕಸ್ಟಡಿಗೆ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಸ್ವಪ್ನಾ ಸುರೇಶ್ ನೀಡಿದ ಮಾಹಿತಿ ಆಧಾರದಲ್ಲಿ ಈ ವಿಚಾರಣೆ ನ಼ಡೆಸಲಾಗುತ್ತಿದೆ ಎಂದು ವರದಿಯಾಗಿದೆ
ಶಿವಶಂಕರ್ ಕೇರಳದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಿನ್ಸಿಪಾಲ್ ಸೆಕ್ರಟರಿಯಾಗಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರನ್ನು ಅಮಾನತು ಮಾಡಲಾಗಿದೆ.