newsics.com
ಅಯೋಧ್ಯೆ: ದುಷ್ಕರ್ಮಿಗಳು ಅಯೋಧ್ಯೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಕುಟುಂಬದ ಇಬ್ಬರು ಹುಡುಗಿಯರು ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಗುಂಡಿನ ದಾಳಿಗೂ ದುರ್ಗಾಷ್ಟಮಿ ಸಮಾರಂಭಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸ್ ಅಧಿಕಾರಿ ಶೈಲೇಶ್ ಪಾಂಡೆ ತಿಳಿಸಿದ್ದಾರೆ.
ಗುಂಡಿನ ದಾಳಿ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.