ನವದೆಹಲಿ: ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ದೆಹಲಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಆಪ್ ಶಾಸಕ ನರೇಶ್ ಯಾದವ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶಾಸಕರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಕಾರುಗಳಲ್ಲಿ ಅವರನ್ನು ಹಿಂಬಾಲಿಸುತ್ತಿದ್ದರು. ಈ ಸಂದರ್ಭದಲ್ಲಿ ದುಷ್ಕರ್ಮಿ ನಡೆಸಿದ ಗುಂಡಿನ ದಾಳಿಯಲ್ಲಿ ಆಪ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆಯನ್ನು ಅಪ್ ತೀಕ್ಷ್ಣವಾಗಿ ಖಂಡಿಸಿದ್ದು, ಸೂಕ್ತ ಭದ್ರತೆ ಒದಗಿಸುವೆಂತೆ ಮನವಿ ಮಾಡಿದೆ.