Saturday, April 17, 2021

ಉತ್ತರ ಪ್ರದೇಶ ವಿಧಾನಸಭೆ ಬಳಿ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಸಾವು

newsics.com
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಯ ಗೇಟ್ ನಂ.7ರ ಬಳಿ ಕರ್ತವ್ಯನಿರತರಾಗಿದ್ದ ಪೊಲೀಸ್‌ ಅಧಿಕಾರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.
ಪೊಲೀಸ್‌ ಅಧಿಕಾರಿ ನಿರ್ಮಲ್ ಚೌಬೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದವರು. ಗುಂಡಿನ ದಾಳಿಗೆ ಒಳಗಾದ ಪೊಲೀಸ್‌ ಅಧಿಕಾರಿ ನಿರ್ಮಲ್ ಚೌಬೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆಯ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಘಟನೆಯ ನಂತರ ಲಕ್ನೋ ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

1-5ನೇ ತರಗತಿ ಮಕ್ಕಳಿಗೆ ಆಫ್’ಲೈನ್ ಕ್ಲಾಸ್ ಇಲ್ಲ; ಪರೀಕ್ಷೆ ನಡೆಸದೆ ಪಾಸ್ ಮಾಡಲು ಚಿಂತನೆ

ದೇಶದಲ್ಲೇ ಬೆಂಗಳೂರು ಬೆಸ್ಟ್ ವಾಸಯೋಗ್ಯ ನಗರ- ಕೇಂದ್ರ ಸರ್ಕಾರದ ಸಮೀಕ್ಷೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!