Monday, April 12, 2021

ಭಾರತ- ಚೀನಾ ಗಡಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಎಂ ಎಂ ನರವಾಣೆ

ನವದೆಹಲಿ:  ಭಾರತ ಮತ್ತು ಚೀನಾ ತನ್ನ ಗಡಿ ಪ್ರದೇಶಗಳಲ್ಲಿ ತಲೆದೋರಿರುವ ಸಮಸ್ಯೆಯನ್ನು ಮಾತುಕತೆ ಮೂಲಕ ಶಾಂತಿಯುತವಾಗಿ ಬಗೆಹರಿಸುವ ಪ್ರಯತ್ನಕ್ಕೆ ಚಾಲನೆ ನೀಡಿದೆ. ಈ  ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ ಎಂದು ಭೂ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ  ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಮಾತುಕತೆಗಳ ಮೂಲಕ ಸಮಸ್ಯೆ ಪರಿಹರಿಸುವ ಇಚ್ಚಾಶಕ್ತಿ ಪ್ರದರ್ಶನದಿಂದ ಉದ್ವಿಗ್ನತೆ ಕ಼ಡಿಮೆಯಾಗಿದೆ  ಎಂದು ಹೇಳಿದರು. ನೇಪಾಳ ಬಗ್ಗೆ ಪ್ರತಿಕ್ರಿಯಿಸಿದ ನರವಾಣೆ, ಭಾರತ ನೇಪಾಳ ಜತೆ  ನಿಕಟವಾದ ಸಂಬಂಧ ಹೊಂದಿದೆ. ಚಾರಿತ್ರಿಕ, ಸಾಮಾಜಿಕ ಸಂಬಂಧ ಉಭಯ ರಾಷ್ಟ್ರಗಳನ್ನು ಬೆಸೆದಿದೆ ಎಂದು ಹೇಳಿದರು. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾಪಡೆ ಯಶಸ್ಸು ಗಳಿಸಿದೆ. ಇದಕ್ಕೆ  ಸ್ಥಳೀಯ ಜನರ ಸಹಕಾರ ಮುಖ್ಯ ಕಾರಣವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!