newsics.com
ನವದೆಹಲಿ: ಉತ್ತರಪ್ರದೇಶದ ನೊಯ್ಡಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಯುವತಿಯೊಬ್ಬಳ ನಿಗೂಢ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೆಬಲ್ಸಹಿತ ಇಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳಲ್ಲಿ ಓರ್ವ ಐಟಿ ಕ್ಷೇತ್ರದ ಹಿರಿಯ ಅಧಿಕಾರಿಯಾಗಿದ್ದಾನೆ. ಆಗಸ್ಟ್ 2ರಂದು 26ರ ಹರೆಯದ ಯುವತಿಯ ಮೃತ ದೇಹ ಹೋಟೆಲ್ ಕೋಣೆಯೊಂದರಲ್ಲಿ ಪತ್ತೆಯಾಗಿತ್ತು.
ಆರಂಭದಲ್ಲಿ ಇದು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಬಳಿಕ ಯುವತಿಯ ಮನೆಯವರು ಈ ಸಂಬಂಧ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದರು.
ಬಂಧಿತ ಪೊಲೀಸ್ ಕಾನ್ಸ್ಟೆಬಲ್ ಪೊಲೀಸ್ ಇಲಾಖೆಯ ಕಂಪ್ಯೂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಯನ್ನು ಅಮಾನತು ಮಾಡಲಾಗಿದೆ.
ಸಾಮೂಹಿಕ ಅತ್ಯಾಚಾರ ಎಸಗಿ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ಮಹಿಳೆಯೊಬ್ಬಳು ಕೂಡ ಶಾಮೀಲಾಗಿದ್ದು ತಲೆ ಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.