Tuesday, April 13, 2021

ದೇಶದ ಅತೀ ದೊಡ್ಡ ಸೌರ ವಿದ್ಯುತ್ ಘಟಕ ದೇಶಕ್ಕೆ ಅರ್ಪಿಸಿದ ಪ್ರಧಾನಿ ಮೋದಿ

ನವದೆಹಲಿ: ಮಧ್ಯಪ್ರದೇಶದ ರೇವಾದಲ್ಲಿ  ನಿರ್ಮಿಸಲಾಗಿರುವ ದೇಶದ ಅತೀ ದೊಡ್ಡ ಸೌರ ವಿದ್ಯುತ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಅರ್ಪಿಸಿದರು. ವೀಡಿಯೋ ಸಂವಾದದ ಮೂಲಕ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೇಶದಲ್ಲಿ ಸೌರ ವಿದ್ಯುತ್ತಿನ ಅಗತ್ಯವನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.

750 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಪ್ರಯೋಜನವನ್ನು ದೆಹಲಿಯ ಮೆಟ್ರೋ ರೈಲು ಕೂಡ ಪಡೆಯಲಿದೆ ಎಂದು ಪ್ರಧಾನಿ ಹೇಳಿದರು. ಸೌರ ವಿದ್ಯುತ್, ಶುದ್ಧ  ಮತ್ತು ಸುರಕ್ಷಿತವಾಗಿದೆ ಎಂದು ಪ್ರಧಾನಿ ಮೋದಿ ನುಡಿದರು. ಮಧ್ಯಪ್ರದೇಶದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಪ್ರಧಾನಿ ಆಶಯ ವ್ಯಕ್ತಪಡಿಸಿದರು.

ಕೊರೋನಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ನೇರವಾಗಿ ಭಾಗವಹಿಸದೆ ವೀಡಿಯೋ ಸಂವಾದದ ಮೂಲಕ ಪ್ರಧಾನಿ ಸೌರ ವಿದ್ಯುತ್ ಘಟಕವನ್ನು ದೇಶಕ್ಕೆ ಅರ್ಪಿಸಿದರು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!