ನವದೆಹಲಿ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟವನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಸಂಬಂಧ ಅಗತ್ಯ ಕಾರ್ಯತಂತ್ರ ಸಿದ್ದಪಡಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಫೆಬ್ರವರಿ 4ರಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಗಳು ಮತ್ತು ಸಂಸತ್ ಸದಸ್ಯರ ಸಭೆ ಕರೆದಿದ್ದಾರೆ. ಪ್ರತಿಪಕ್ಷಗಳ ಮಧ್ಯೆ ಒಗ್ಗಟ್ಟಿನ ಕೊರತೆ ಕಾಂಗ್ರೆಸ್ ನಾಯಕರ ಕಳವಳಕ್ಕೆ ಕಾರಣವಾಗಿದೆ.