Saturday, June 10, 2023

ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ

Follow Us

newsics.com

ನವದೆಹಲಿ: ನೂತನ ಸಂಸತ್ ಭವನ  ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು  ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

 ನಾಣ್ಯದ ವಿಶೇಷತೆ:

75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ.  ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.

ಶಾದಿ ಡಾಟ್ ಕಾಮ್‍; ಮದುವೆ ಆಗೋದಾಗಿ ನಂಬಿಸಿ ಕಾಮತೃಷೆ ತೀರಿಸಿಕೊಂಡು ಕೈ ಕೊಟ್ಟ ವಂಚಕ!

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!