Tuesday, April 13, 2021

ನ್ಯೂಯಾರ್ಕ್ ನಿಂದ ಹೈದರಾಬಾದ್ ಗೆ ಆಗಮಿಸಿದ ವಿಶೇಷ ವಿಮಾನ

ಹೈದರಾಬಾದ್:  ನ್ಯೂಯಾರ್ಕ್ ನಿಂದ 121 ಮಂದಿ ಪ್ರಯಾಣಿಕರನ್ನು ಕರೆ ತಂದ ಏರ್ ಇಂಡಿಯಾ ವಿಶೇಷ ವಿಮಾನ ಇಂದು ಮುಂಜಾನೆ 3.14ಕ್ಕೆ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಇದೇ ಮೊದಲ ಬಾರಿಗೆ ಲಾಕ್ ಡೌನ್ ಘೋಷಣೆಯಾದ ಬಳಿಕ ನ್ಯೂಯಾರ್ಕ್ ನಿಂದ ಹೈದರಾಬಾದ್ ಗೆ ವಿಮಾನ  ಬಂದಿಳಿದೆ. ಎಲ್ಲ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಸಮಗ್ರ ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಯಿತು.  ಬಳಿಕ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲಾಯಿತು. ಅಮೆರಿಕದ ಮಹಾ ನಗರಗಳ ಪೈಕಿ ನ್ಯೂಯಾರ್ಕ್ ಕೊರೋನಾದಿಂದ ಅತೀ ಹೆಚ್ಚು ತೊಂದರೆ ಅನುಭವಿಸಿದೆ. ನಗರದಲ್ಲಿ  ಈಗಲೂ ಸ್ಮಶಾನ ಮೌನ  ನೆಲೆಸಿದೆ.  ಈ ಮಧ್ಯೆ ಅಮೆರಿಕದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 83000 ದಾಟಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!