Monday, November 29, 2021

ವಲಸೆ ಕಾರ್ಮಿಕರಿಗೆ ವಿಶೇಷ ರೈಲು: ಗೃಹ ಸಚಿವಾಲಯದ ಅಧಿಸೂಚನೆ ಪ್ರಕಟ

Follow Us

ನವದೆಹಲಿ:   ದೇಶದ ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರಿಗೆ ಕರೆದೊಯ್ಯಲು  ವಿಶೇಷ ರೈಲು ಸಂಚಾರ ನಡೆಸಲಿದೆ. ಈ ವಿಶೇಷ ರೈಲು ಒಂದು ರೈಲು ನಿಲ್ದಾಣದಿಂದ ಹೊರಟ ಬಳಿಕ ಕೊನೆಯ ರೈಲು ನಿಲ್ದಾಣದಲ್ಲಿ ಮಾತ್ರ ನಿಲ್ಲಲಿದೆ. ಸಾಮಾಜಿಕ ಅಂತರದ ಪಾಲನೆ, ರೈಲು ಬೋಗಿಗಳ ಸ್ಯಾನಿಟೇಷನ್  ಹೀಗೆ ಹಲವು ಮುಂಜಾಗ್ರತ ಕ್ರಮಗಳನ್ನು ಖಾತರಿಪಡಿಸಿದ ಬಳಿಕವಷ್ಟೇ ರೈಲು ಸಂಚಾರ ಆರಂಭಿಸಲಿದೆ. ಇದು ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಿಲುಕಿರುವ ಉತ್ತರ ಭಾರತದ ಕಾರ್ಮಿಕರಿಗೆ ನೆರವಾಗಲಿದೆ. ಕೇರಳ ಮತ್ತು ಮಹಾರಾಷ್ಟ್ರ  ವಿಶೇಷ ರೈಲು ಆರಂಭಿಸುವಂತೆ ಕೇಂದ್ರ ಸರ್ಕಾರದ ಮೇಲೆ ಬಲವಾದ ಒತ್ತಡ ಹೇರಿದ್ದವು

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!