newsics.com
ನವದೆಹಲಿ: ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ವಿಮಾನ ಚಟುವಟಿಕೆ ಸ್ಥಗಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸ್ಪೈಸ್ ಜೆಟ್ ಸುಪ್ರೀಂ ಕೋರ್ಟ್ ನಲ್ಲಿ ಇಂದು ಮನವಿ ಮಾಡಿದೆ.
ಸಂಸ್ಥೆಯ ಮನವಿ ಅಂಗೀಕರಿಸಿದ ಮುಖ್ಯನ್ಯಾಯಮೂರ್ತಿ ರಮಣ ಅವರು ಜನವರಿ 28ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.
180 ಕೋಟಿ ರೂಪಾಯಿ ಪಾವತಿಗೆ ಸಂಬಂಧಿಸಿದಂತೆ ವಿದೇಶಿ ಸಂಸ್ಥೆ ಮತ್ತು ಸ್ಪೈಸ್ ಜೆಟ್ ಮಧ್ಯೆ ವಿವಾದ ತಲೆ ದೋರಿದೆ. ಸಂಸ್ಥೆಯ ನಷ್ಟದ ಪ್ರಮಾಣ ಕೂಡ ಹೆಚ್ಚಾಗಿದೆ.