newsics.com
ನವದೆಹಲಿ: ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ ಸಂಪರ್ಕಿಸಿ ತುರ್ತು ಭೂ ಸ್ಪರ್ಶಕ್ಕೆ ಅನುಮತಿ ಕೋರಿದರು.
ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಕಳೆದ ವಾರ ಸ್ಪೈಸ್ ಜೆಟ್ ಗೆ ಸೇರಿದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದು ಆತಂಕ ಸೃಷ್ಟಿಸಿತ್ತು