Wednesday, October 5, 2022

ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾಗೆ ‘ಸುಪ್ರೀಂ’ ಸಂಕಷ್ಟ

Follow Us

newsics.com
ನವದೆಹಲಿ: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದಾರೆ.
ಇದರಿಂದಾಗಿ ಕುನಾಲ್ ಕಮ್ರಾಗೆ ಸಂಕಷ್ಟ ಎದುರಾಗಿದೆ. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಜಾಮೀನು ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದೇ ಕುನಾಲ್ ಕಮ್ರಾಗೆ ಸಂಕಷ್ಟ ತಂದೊಡ್ಡಿದೆ.
ಸುಪ್ರೀಂ ಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಉಲ್ಲೇಖಿಸಿ ಕುನಾಲ್ ಕಮ್ರಾ ನಾಲ್ಕು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಕಮ್ರಾ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ರಿಜ್ವಾನ್ ಸಿದ್ದಿಕಿ ಸೇರಿದಂತೆ ವಕೀಲರಿಬ್ಬರು ಪ್ರಕರಣ ದಾಖಲಿಸಲು ಅನುಮತಿ ಕೋರಿ ಅಟಾರ್ನಿ ಜನರಲ್’ಗೆ ಪತ್ರ ಬರೆದಿದ್ದರು. ಅರ್ನಬ್ ಜಾಮೀನು ಅರ್ಜಿ ವಿಚಾರಣೆ ವೇಳೆಯಷ್ಟೇ ಅಲ್ಲದೆ, ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ಕಮ್ರಾ ಟ್ವೀಟ್ ಮಾಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಟೀಕಿಸಿದ್ದರು.

ಬಿಹಾರ ವಿಧಾನಸಭೆ; 163 ವಿಜೇತರ ವಿರುದ್ಧ ಕ್ರಿಮಿನಲ್ ಕೇಸ್

ಚುನಾವಣಾ ಫಲಿತಾಂಶ ಪ್ರಶ್ನಿಸಿ ಮಿಶಿಗನ್ ಕೋರ್ಟ್’ನಲ್ಲಿ ಟ್ರಂಪ್ ಮೊಕದ್ದಮೆ

ದೀಪಾವಳಿ ಆಚರಿಸದಂತೆ ಶ್ರೀಲಂಕಾ ಸರ್ಕಾರ ಮನವಿ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!