Saturday, April 17, 2021

ಕೇಂದ್ರದ ಮಾರ್ಗಸೂಚಿ ಪಾಲಿಸಲು ಕಟ್ಟು ನಿಟ್ಟಿನ ಸೂಚನೆ

ನವದೆಹಲಿ:  ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಲಾಕ್ ಡೌನ್ 4ನೇ ಹಂತದ ಮಾರ್ಗಸೂಚಿಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ  ಸೂಚನೆ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸೂಚನೆ ನೀಡಿದೆ. ಲಾಕ್ ಡೌನ್ 4ರ ಅಡಿಯಲ್ಲಿ ರಾಜ್ಯಗಳಿಗೆ ಕೆಲವು  ಸ್ವಯಂ ನಿರ್ಧಾರದ ಹಕ್ಕನ್ನು ನೀಡಲಾಗಿದೆ. ಕೆಲವು ರಾಜ್ಯಗಳು ಇದರ  ವ್ಯಾಪ್ತಿ ಬಿಟ್ಟು ನಿರ್ಧಾರ ತೆಗೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ಸೂಚನೆ ನೀಡಿದೆ. ದೇಶದಲ್ಲಿ ದಾಖಲೆ ಸಂಖ್ಯೆಯ ಕೊರೋನಾ ಸೋಂಕು  ಪ್ರಕರಣ ವರದಿಯಾಗಿದ್ದು, ಯಾವುದೇ ರಿಸ್ಕ್ ತೆಗೆದುಕೊಳ್ಳದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!