newsics.com
ನವದೆಹಲಿ: ಕೇಂದ್ರ ಸರ್ಕಾರ ವಾಯು ಮಾಲಿನ್ಯ ತಡೆಗಟ್ಟುವ ಸಂಬಂಧ ಕಾರುಗಳಿಗೆ ಕಠಿಣ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಿದರೆ ಮುಂದಿನ ದಿನಗಳಲ್ಲಿ ಕಾರುಗಳ ಬೇಡಿಕೆ ಕುಸಿಯಲಿದೆ ಎಂದು ಮಾರುತಿ ಸುಜುಕಿ ಸಂಸ್ಥೆಯ ಅಧ್ಯಕ್ಷ ಆರ್ ಸಿ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರದ ಕ್ರಮಗಳಿಂದಾಗಿ ಕಾರುಗಳ ಬೇಡಿಕೆ ಹೆಚ್ಚಾಗಲಿದೆ ಎಂಬುದು ಸುಳ್ಳು. ಬದಲಾಗಿ ಇಳಿಕೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮುಂದಿನ ವರ್ಷ ಪರಿಸರ ಸ್ನೇಹಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ