Saturday, April 17, 2021

ಆನ್ ಲೈನ್ ಕ್ಲಾಸ್ ಗೆ ಸೇರಲು ಅಡ್ಡಿ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ತಿರುವನಂತಪುರಂ: ಮನೆಯಲ್ಲಿ ಆನ್ ಲೈನ್  ತರಗತಿ ಮೂಲಕ ಶಿಕ್ಷಣ ಮುಂದುವರಿಸಲು ಅಸಮರ್ಥಳಾದ  ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಮಲಪುರಂ ಜಿಲ್ಲೆಯಲ್ಲಿ ನಡೆದಿದೆ. ಮಲಪುರಂ ಜಿಲ್ಲೆಯ  ವಳಂಚೇರಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟ  ವಿದ್ಯಾರ್ಥಿಯನ್ನು  ದೀವಿಕಾ ಎಂದು ಗುರುತಿಸಲಾಗಿದೆ. 10ನೇ ತರಗತಿಯಲ್ಲಿ ಕಲಿಯುತ್ತಿದ್ದ ದೀವಿಕಾ ಬಡ ಕುಟುಂಬಕ್ಕೆ ಸೇರಿದವರಾಗಿದ್ದರು. ಮನೆಯಲ್ಲಿದ್ದ ಟಿ ವಿ ಹಾಳಾಗಿತ್ತು. ಸ್ಮಾರ್ಟ್ ಪೋನ್  ಇರಲಿಲ್ಲ. ಜೂನ್ 1ರಂದು ಕೇರಳದಲ್ಲಿ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾಗಿದ್ದು, ಇದರಲ್ಲಿ ಸೇರಲು ದೀವಿಕಾ ಅವರಿಗೆ ಸಾಧ್ಯವಾಗಿರಲಿಲ್ಲ. ಇದರಿಂದಾಗಿ ದೀವಿಕಾ ತುಂಬಾ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ಹೇಳಲಾಗಿದೆ. ದೀವಿಕಾ ಅವರ ತಂದೆ ಕೂಲಿ ಕಾರ್ಮಿಕರಾಗಿದ್ದು, ಲಾಕ್ ಡೌನ್ ನಿಂದಾಗಿ ಕೆಲಸ ಇರಲಿಲ್ಲ. ನಿನ್ನೆ ರಾತ್ರಿ ಮನೆಯ ಸಮೀಪ ಬೆಂಕಿ ಹಚ್ಚಿ ದೀವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!