Saturday, April 17, 2021

ಕಾಸರಗೋಡಿನಲ್ಲಿ ಶೂನ್ಯದಿಂದ 26ಕ್ಕೆ ಏರಿದ ಕೊರೋನಾ ಸೋಂಕಿತರು

ಕಾಸರಗೋಡು:  ಕೊರೋನಾ ಮುಕ್ತ ಜಿಲ್ಲೆ ಎಂದು ಘೋಷಣೆಯಾದ ಒಂದು ವಾರದೊಳಗೆ ಕಾಸರಗೋಡಿನಲ್ಲಿ 26 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಭಾನುವಾರ ಕಾಸರಗೋಡಿನಲ್ಲಿ ಐದು ಕೊರೋನಾ   ಪ್ರಕರಣ ವರದಿಯಾಗಿತ್ತು. ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಕೇರಳದಲ್ಲಿ ಲಾಕ್ ಡೌನ್  ನಿಯಮ ಸಡಿಲಿಕೆ ಮಾಡಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಾಜ್ಯಕ್ಕೆ ಹಿಂತಿರುಗುತ್ತಿದ್ದಾರೆ. ಇದುವರೆಗೆ ಬಸ್, ರೈಲು, ವಿಮಾನ ಮತ್ತು ಹಡಗಿನ ಮೂಲಕ ಕೇರಳಕ್ಕೆ  93, 404 ಮಂದಿ ಆಗಮಿಸಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 842ಕ್ಕೆ ಏರಿದ್ದು, 322 ಮಂದಿ ವಿವಿಧ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಕೊರೋನಾ ತ಼ಡೆಗಟ್ಟಲು ಪಾಲಕ್ಕಾಡ್ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!