Monday, November 29, 2021

ಜಯಲಲಿತಾ ಸಾಕುಪುತ್ರ ಸುಧಾಕರನ್​ ಜೈಲಿನಿಂದ ಬಿಡುಗಡೆ

Follow Us

newsics.com

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರ ದತ್ತು ಮಗ ವಿ.ಎನ್​.ಸುಧಾಕರನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಗೂ ಮುನ್ನ ಸುಧಾಕರನ್ ಬಿಡುಗಡೆಯಾಗಬೇಕಿತ್ತು. ಆದರೆ 10 ಕೋಟಿ ರೂಪಾಯಿ ದಂಡ ಕಟ್ಟದೆ 1 ವರ್ಷ ಹೆಚ್ಚಿನ ಜೈಲು ವಾಸ ಅನುಭವಿಸಿ ಸುಧಾಕರನ್​ ಬಿಡುಗಡೆಯಾಗಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸುಧಾಕರನ್ ಹಾಗೂ ಶಶಿಕಲಾ 2017ರಲ್ಲಿ ಬಂಧಿತರಾಗಿದ್ದರು. ಇದೀಗ 5 ವರ್ಷಗಳ ಜೈಲುವಾಸ ಮುಗಿಸಿ ಸುಧಾಕರನ್ ಬಿಡುಗಡೆಯಾಗಿದ್ದು, ಚೈನ್ನೈಗೆ ತೆರಳಿದ್ದಾರೆ.

ಇಂಡೋನೇಷ್ಯಾದಲ್ಲಿ ಭೂಕಂಪಕ್ಕೆ ಮೂವರು ಸಾವು: 4.8 ತೀವ್ರತೆ ದಾಖಲು

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!