ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಎಲ್ಲರ ಗಮನ ಸೆಳೆದಿರುವ ಶಾಹೀನ್ ಭಾಗ್ ಪ್ರತಿಭಟನೆ ಕುರಿತು ಸುಪ್ರೀಂ ಕೋರ್ಟ್ ಸಂಧಾನದ ಒಲವನ್ನು ವ್ಯಕ್ತಪಡಿಸಿದೆ. ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಪ್ರತಿಭಟನೆ ಮಾಡಿ. ಇದಕ್ಕೆ ಅಭ್ಯಂತರವಿಲ್ಲ. ಆದರೆ ಪ್ರತಿಭಟನೆ ಹೆಸರಿನಲ್ಲಿ ರಸ್ತೆ ಸಂಚಾರಕ್ಕೆ ತಡೆಯಾಗಬೇಡಿ, ಎಲ್ಲರೂ ರಸ್ತೆಯಲ್ಲಿ ಪ್ರತಿಭಟನೆ ಆರಂಭಿಸಿದರೆ ಪರಿಸ್ಥಿತಿ ಎನಾಗಲಿದೆ ಎಂದು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಈ ಕುರಿತು ಶಾಹೀನ್ ಭಾಗ್ ಪ್ರತಿಭಟನಾ ನಿರತರೊಂದಿಗೆ ಸಂಧಾನ ನಡೆಸುವಂತೆ ಹಿರಿಯ ನ್ಯಾಯವಾದಿ ಸಂಜಯ ಹೆಗಡೆ ಅವರಿಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.