Saturday, December 10, 2022

ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ

Follow Us

newsics.com
ನವದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.
ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಅದಿರು ರಫ್ತು ಮಾಡಲು ಅನುಮತಿ ನೀಡಲಾಗಿದೆ.
2011ರಲ್ಲಿ ಕರ್ನಾಟಕದಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡುವಂತೆ ಗಣಿ ನಿರ್ವಾಹಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ ರಮಣ ನೇತೃತ್ವದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.
ಈಗಾಗಲೇ ಅಗೆದಿರುವ ಕಬ್ಬಿಣದ ಅದಿರನ್ನು ನೇರ ಒಪ್ಪಂದ ಮಾಡಿಕೊಂಡು ಮಾರಾಟ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಐವರು‌ ಮಹಿಳೆಯರು ಸೇರಿ 9 ಮಂದಿ ಜಲಸಮಾಧಿ

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!