ನವದೆಹಲಿ: ಅಳಿವಿನಂಚಿನಲ್ಲಿರುವ ಆಫ್ರಿಕಾದ ನಮೀಬಿಯಾದಿಂದ ಚಿರತೆಗಳನ್ನು ಇಲ್ಲಿನ ನಿರ್ದಿಷ್ಟ ಪ್ರದೇಶಗಳಲ್ಲಿ ತಂದುಬಿಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಈ ತಳಿಯ ಚಿರತೆಯು ಅಳಿವಿನಂಚಿನಲ್ಲಿರುವುದರಿಂದ ಅದನ್ನು ಭಾರತದಲ್ಲಿ ತಂದು ಸಾಕಲು ಅನುಮತಿ ನೀಡಬೇಕೆಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಸಲ್ಲಿಸಿದ್ದ ಮನವಿಯ ಪರಿಶೀಲನೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರ ನೇತೃತ್ವದ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.
ಆಫ್ರಿಕಾದ ಚಿರತೆಗಳನ್ನು ಭಾರತಕ್ಕೆ ತರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ತಜ್ಞರ ಸಮಿತಿಯಿಂದ ಪ್ರತಿ 4 ತಿಂಗಳುಗಳಿಗೊಮ್ಮೆ ಪ್ರಗತಿ ವರದಿಯನ್ನು ತನಗೆ ಸಲ್ಲಿಸುವಂತೆಯೂ ನ್ಯಾಯಪೀಠ ಆದೇಶ ನೀಡಿದೆ.