Friday, March 31, 2023

ಕಳಂಕಿತರ ಸಮಗ್ರ ಮಾಹಿತಿ ಪ್ರಕಟಿಸಲು ಸುಪ್ರೀಂ ಆದೇಶ

Follow Us

ನವದೆಹಲಿ:  ದೇಶದಲ್ಲಿ ಹೆಚ್ಚುತ್ತಿರುವ ರಾಜಕೀಯ ಅಪರಾಧೀಕರಣಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದು ಅತ್ಯಂತ ಗಂಭೀರವಾದ ವಿಷಯ ಎಂದು ಸುಪ್ರೀಂ ಕೋರ್ಟ್  ಅಭಿಪ್ರಾಯಪಟ್ಟಿದೆ. ಕಳಂಕಿತರನ್ನು ಮತ್ತು ಕ್ರಿಮಿನಲ್ ಹಿನ್ನೆಲೆ ಇರುವವರನ್ನು ರಾಜಕೀಯದಿಂದ ದೂರ ಇಡಲು ಸುಪ್ರೀಂ ಕೋರ್ಟ್ ಹಲವು  ಮಾರ್ಗದರ್ಶಿ ಸೂತ್ರಗಳನ್ನು ಸೂಚಿಸಿದೆ. ಅಪರಾಧಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ಯಾಕೆ ಟಿಕೇಟ್ ನೀಡಲಾಗಿದೆ ಎಂಬುದನ್ನು ರಾಜಕೀಯ ಪಕ್ಷಗಳು ಸ್ಪಷ್ಟಪಡಿಸಬೇಕು. ಈ ಸಂಬಂಧ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕು. ಅಭ್ಯರ್ಥಿಯ ಕ್ರಿಮಿನಲ್ ಪ್ರಕರಣ ಕುರಿತಂತೆ 48 ಗಂಟೆಯೊಳಗೆ ವೆಬ್ ಸೈಟ್ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸಮಗ್ರ ಮಾಹಿತಿ ಪ್ರಕಟಿಸಬೇಕು. ಚುನಾವಣಾ ಆಯೋಗಕ್ಕೂ ಮಾಹಿತಿ ನೀಡಬೇಕು. ಇದನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!