Saturday, June 10, 2023

5, 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ ಕೋರ್ಟ್

Follow Us

newsics.com

ವದೆಹಲಿ: 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ನೀಡಿದೆ.

2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ಮುಂದಾಗಿತ್ತು. ಈ ವಿರುದ್ಧ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅದರಂತೆ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಪರೀಕ್ಷೆ ನಡೆಸದಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಮಾರ್ಚ್ 16ರಂದು ಆದೇಶ ಹೊರಡಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದು ಹೇಳಿ, ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯೊಡ್ಡಿತ್ತು. ಅಲ್ಲದೆ, ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿತ್ತು.

ಇದನ್ನು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ, ತುರ್ತು ವಿಚಾರಣೆ ನಡೆಸಲು ಮನವಿ ಮಾಡಿತ್ತು. ಇಂದು ವಿಚಾರಣೆ ನಡೆಸಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!