Thursday, October 29, 2020

ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ:  ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕೆಂಬ ಅರ್ಜಿ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ 9 ಸದಸ್ಯರನ್ನೊಳಗೊಂಡ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ. ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇವಲ ಕಾನೂನಾತ್ಮಕ ಅಂಶಗಳನ್ನು ಮಾತ್ರ ನ್ಯಾಯಾಲಯ ಪರಿಗಣಿಸಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.  ಈ ಹಿಂದೆ ಸುಪ್ರೀಂ ಕೋರ್ಟಿನ  ಐವರು ಸದಸ್ಯರನ್ನೊಳಗೊಂಡ ಸಂವಿಧಾನಿಕ ಪೀಠ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಬಳಿಕ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಯಿತು.  ಇದೀಗ ಕೇವಲ 10 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ 4025 ಜನರಿಗೆ ಕೊರೋನಾ ಸೋಂಕು, 45 ಮಂದಿ ಸಾವು

newsics.comಬೆಂಗಳೂರು: ರಾಜ್ಯದಲ್ಲಿ ಇಂದು (ಅ.29) ಹೊಸದಾಗಿ 4025 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ.ರಾಜ್ಯ ಆರೋಗ್ಯ...

ಪುಲ್ವಾಮಾ ದಾಳಿಗೆ ನಾವೇ ಹೊಣೆ ಎಂದ ಪಾಕ್ ಸಚಿವ!

newsics.comಇಸ್ಲಾಮಾಬಾದ್​: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ಪಾಕಿಸ್ತಾನದ​ ಸಚಿವ ಫವಾದ್​ ಚೌಧರಿ ಹೇಳಿದ್ದಾರೆ.ಈ ದಾಳಿಯಲ್ಲಿ ಭಾರತ ಪ್ಯಾರಾಮಿಲಿಟರಿ ಪಡೆಯ 30 ಸೈನಿಕರು ಹುತಾತ್ಮರಾಗಿದ್ದ ಘಟನೆಗೆ ಪಾಕಿಸ್ತಾನವೇ...

ಸೆಣಬಿನ ಚೀಲಗಳಲ್ಲೇ ಆಹಾರ ಧಾನ್ಯ ತುಂಬಲು ಕೇಂದ್ರ ಆದೇಶ

newsics.comನವದೆಹಲಿ: ಇನ್ಮುಂದೆ ಆಹಾರ ಧಾನ್ಯಗಳನ್ನು ಸೆಣಬಿನ ಚೀಲಗಳಲ್ಲಿ ತುಂಬಿಸುವುದು ಕಡ್ಡಾಯಗೊಳಿಸಿ ಇಂದು(ಅ.29) ಕೇಂದ್ರ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.ಸೆಣಬಿನ ಚೀಲಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ...
- Advertisement -
- Advertisement -
error: Content is protected !!