Saturday, April 17, 2021

ಖಾಸಗಿ ಆಸ್ಪತ್ರೆಗಳಿಂದ ಸುಲಿಗೆ ಆರೋಪ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಚಿಕಿತ್ಸೆಯ ಹೆಸರಿನಲ್ಲಿ ರೋಗಿಗಳಿಂದ ಅಕ್ಷರಶ:  ಸುಲಿಗೆ ಮಾಡುತ್ತಿರುವ ಕೆಲವು ಖಾಸಗಿ ಆಸ್ಪತ್ರೆಗಳ ಕಾರ್ಯ ವೈಖರಿ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಸಮಗ್ರ ಮಾಹಿತಿ ನೀಡುವಂತೆ ಆದೇಶ ನೀಡಿದೆ. ದೇಶದ ಖಾಸಗಿ ಆಸ್ಪತ್ರೆಗಳಲ್ಲಿ  ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ. ಮಿತಿ ಮೀರಿದ ಹಣ  ಚಿಕಿತ್ಸೆಯ ಹೆಸರಿನಲ್ಲಿ  ವಸೂಲಿಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಕೆಲವು ಆಸ್ಪತ್ರೆಗಳು ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಸೇರಿದಂತೆ ಹಲವು ಸೌಲಭ್ಯ ಪಡೆದಿದ್ದರೂ ರೋಗಿಗಳಿಗೆ  ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ  ನೀಡುತ್ತಿಲ್ಲ ಎಂದು ಆರೋಪಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!