ನವದೆಹಲಿ: ತೆರೆದ ಕೊಳವೆ ಬಾವಿಗಳಿಗೆ ಮಕ್ಕಳು ಬೀಳುವ ಘಟನೆಗಳನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ತೆರೆದ ಕೊಳವೆ ಬಾವಿಗಳಿಗೆ ಮಕ್ಕಳು ಬಲಿಯಾಗುವುದನ್ನು ತಡೆಯಲು 2010ರಲ್ಲಿ ಹೊರಡಿಸಿದ್ದ 16 ಮಾರ್ಗಸೂಚಿಗಳನ್ನು ಎಷ್ಟರ ಮಟ್ಟಿಗೆ ಪಾಲಿಸಲಾಗಿದೆ ಎಂಬುದ ಕುರಿತು ವಿವರ ನೀಡುವಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಲಾಗಿದೆ.
ತೆರೆದ ಬಾವಿಗೆ ಮಕ್ಕಳ ಬಲಿ: ಸರ್ಕಾರಕ್ಕೆ ಸುಪ್ರೀಂ ನೋಟಿಸ್
Follow Us