ನವದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನೀಡಿದ ಅನುಮತಿ ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಕುರಿತು ಸಭೆ ನಡೆಸಿ ಚರ್ಚಿಸಿ ನಿರ್ಧಾರಕ್ಕೆ ಬರುವಂತೆ ವಕೀಲರಿಗೆ ಸುಪ್ರೀಂಕೋರ್ ಸೂಚಿಸಿದೆ.
ಇಂದು ಮರುಪರಿಶೀಲನಾ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ, ಅಯೋಧ್ಯೆ ಪ್ರಕರಣದ ಮಾದರಿಯಲ್ಲೇ ದಿನನಿತ್ಯ ಪ್ರಕರಣದ ವಿಚಾರಣೆ ನಡೆಸಲಾಗುವುದು. ಪ್ರಕರಣದ ಕುರಿತು ಏಳು ಪ್ರಶ್ನೆಗಳನ್ನು ಮುಂದಿಟ್ಟಿದೆ. ಜ. 17ರಂದು ಸಭೆ ಯಾವ ಅಂಶಗಳನ್ನು ಮಂಡಿಸಬೇಕು ಎಂಬುದನ್ನು ನಿರ್ಧರಿಸಿ ಮಾಹಿತಿ ನೀಡುವಂತೆ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ. ಅದೇ ದಿನ ನ್ಯಾಯಮೂರ್ತಿಗಳು ಕೂಡ ಸಭೆ ನಡೆಸಲಿದ್ದಾರೆ.