ನವದೆಹಲಿ: ಮರಣದಂಡನೆ ಶಿಕ್ಷೆಗೊಳಗಾಗಿರುವ ಅಪರಾಧಿಗಳಿಗೆ ಮೇಲ್ಮನವಿ ಸಲ್ಲಿಸಲು ಗಡುವು ಇರುವಾಗಲೇ ಡೆತ್ ವಾರಂಟ್ ಜಾರಿಗೊಳಿಸುತ್ತಿರುವ ವಿಚಾರಣಾ ನ್ಯಾಯಾಲಯಗಳ ವಿರುದ್ಧ ಸುಪ್ರೀಂಕೋರ್ಟ್ ಗರಂ ಆಗಿದೆ.
ಸೂರತ್ ನಗರದ ಮಗುವಿನ ಅತ್ಯಾಚಾರ ಪ್ರಕರಣದ ಆರೋಪಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಪೀಠ, ನ್ಯಾಯ ವ್ಯವಸ್ಥೆ ಈ ರೀತಿ ಸಾಗುವುದನ್ನು ಎಂದಿಗೂ ಒಪ್ಪಲಾಗದು ಎಂದು ಬೇಸರ ವ್ಯಕ್ತಪಡಿಸಿದೆ. ಅಧೀನ ನ್ಯಾಯಾಲಯಗಳು ಈ ರೀತಿ ಡೆತ್ ವಾರೆಂಟ್ ಜಾರಿಗೊಳಿಸಲು ಕಾರಣಗಳೇನು…? ಎಂಬುದನ್ನು ಅವರದಿ ನೀಡುವಂತೆ ಸಾಲಿಸಿಟರ್ ಜನರಲ್ ಅವರಿಗೆ ನ್ಯಾಯಪೀಠ ಆದೇಶಿಸಿದೆ.