Saturday, April 17, 2021

ಆನ್ ಲೈನ್ ಮೂಲಕ ಮದ್ಯ ಮಾರಾಟ ಪರಿಗಣಿಸಲು ಸುಪ್ರೀಂ ಸೂಚನೆ

ನವದೆಹಲಿ:ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಆನ್ ಲೈನ್ ಮೂಲಕ ಮದ್ಯ ಮಾರಾಟ ಸಾಧ್ಯತೆಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ  ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜ್ಯಗಳಿಗೆ ಪ್ರತ್ಯೇಕ ಪ್ರತ್ಯೇಕ ಆದೇಶ  ನೀಡಲು ಸಾಧ್ಯವಿಲ್ಲ. ಆದರೆ ಪ್ರಸಕ್ತ ಆತಂಕ ಸೃಷ್ಟಿಸಿರುವ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಅಂತರ ಕಾಪಾಡುವುದು ಅಗತ್ಯ. ಇದನ್ನು ಪರಿಗಣಿಸಿ ಮನೆಗೆ ಮದ್ಯ ಮಾರಾಟ ಸೇರಿದಂತೆ ಆನ್ ಲೈನ್ ಸಾಧ್ಯತೆ ಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. 40 ದಿನಗಳ ಲಾಕ್ ಡೌನ್ ನಿಷೇಧದ ಬಳಿಕ ಮದ್ಯದ ಅಂಗಡಿ ಆರಂಭಗೊಂಡಾಗ ದೇಶದೆಲ್ಲೆಡೆ ಸಾವಿರಾರು ಮಂದಿ ಮದ್ಯ ಖರೀದಿಸಲು ಮುಗಿ ಬಿದ್ದಿದ್ದರು. . ಬಳಿಕ ಮುಂಬೈ ನಗರದಲ್ಲಿ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!