ನವದೆಹಲಿ: ಶಬರಿಮಲೆಗೆ ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಇಂದಿನಿಂದ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ 9 ಸದಸ್ಯರ ವಿಸ್ತೃತ ಪೀಠ ಈ ವಿಚಾರಣೆ ಕೈಗೆತ್ತಿಕೊಳ್ಳಲಿದೆ. 2018ರಲ್ಲಿ ಈ ಹಿಂದೆ ನೀಡಿದ್ದ ತೀರ್ಪಿನಲ್ಲಿ ಎಲ್ಲರಿಗೂ ದೇವಸ್ಥಾನ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.