ನವದೆಹಲಿ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ವಿಸ್ತೃತ ಪೀಠ ರಚಿಸಿರುವ ತನ್ನ ಕ್ರಮವನ್ನು ಸುಪ್ರೀಂ ಕೋರ್ಟ್ ಸಮರ್ಥಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿರಿಯ ಸಂವಿಧಾನ ತಜ್ಞ ಫಾಲಿ ಎಸ್ ನಾರಿಮನ್ ಸೇರಿದಂತೆ ಹಲವು ಸಂವಿಧಾನ ತಜ್ಞರು ಈ ಪೀಠ ರಚನೆಗೆ ಅಪಸ್ವರ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಮೊದಲು ಈ ಗೊಂದಲ ಪರಿಹರಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದೀಗ ತನ್ನ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಕೇವಲ ಏಳು ವಿಷಯಗಳನ್ನು ಮಾತ್ರ ಪರಿಗಣಿಸುವುದಾಗಿ ಸ್ಪಷ್ಟಪಡಿಸಿದೆ.