Saturday, November 26, 2022

ವಿದ್ಯಾರ್ಥಿ ಮೃತಪಟ್ಟರೆ ಹುಷಾರ್: ಆಂಧ್ರ, ಕೇರಳಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Follow Us

newsics.com

ನವದೆಹಲಿ: ಕೊರೋನಾ ಆತಂಕದ ನಡುವೆಯೂ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಹಾಗೂ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ.

ಪರೀಕ್ಷೆಯಿಂದ ಯಾವುದೇ ಸಾವು ವರದಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದ್ದು, ಈ ಸಂಬಂಧ 2 ದಿನದಲ್ಲಿ ಅಂತಿಮ ನಿರ್ಧಾರ ತಿಳಿಸುವಂತೆ ಸೂಚಿಸಿದೆ.

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ.ಖಾನ್ವಿಲ್ಕರ್ ಮತ್ತು ನ್ಯಾ.ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠ, ದೇಶದ ಎಲ್ಲ ರಾಜ್ಯಗಳು ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದ್ದರೂ ನೀವೇಕೆ ಅಂತಹ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಆಂಧ್ರ ಸರ್ಕಾರವನ್ನು ಕೋರ್ಟ್‌ ಪ್ರಶ್ನಿಸಿದ್ದು, ಈ‌ ಕುರಿತು ಸರ್ಕಾರದಿಂದ ಯಾವುದೇ ಸ್ಪಷ್ಟತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಕೋವಿಡ್‌ 3ನೇ ಅಲೆ ತೀವ್ರವಾಗಿರುತ್ತದೆ ಎಂದು ದೆಹಲಿ ಏಮ್ಸ್ ನಿರ್ದೇಶಕರು ಎಚ್ಚರಿಸಿದ್ದಾರೆ. ಹೀಗಾಗಿ ಆ ಸಮಯದಲ್ಲಿ ಪರೀಕ್ಷೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂದು ನ್ಯಾಯಪೀಠ ಪ್ರಶ್ನಿಸಿದೆ.

28 ರಾಜ್ಯಗಳ ಪೈಕಿ 6 ರಾಜ್ಯಗಳು ಈಗಾಗಲೇ ಬೋರ್ಡ್‌ ಪರೀಕ್ಷೆ ನಡೆಸಿದ್ದು, 18 ರಾಜ್ಯಗಳು ರದ್ದು ಮಾಡಿವೆ. ಆದರೆ ಅಸ್ಸೋಂ, ಪಂಜಾಬ್‌, ತ್ರಿಪುರಾ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ಮಾತ್ರ ಪರೀಕ್ಷೆ ನಡೆಸಲು ಮುಂದಾಗಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!