ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ನೇಣುಗಂಬಕ್ಕೆ ಏರಿಸಲು ಅನುಮತಿ ನೀಡಬೇಕೆಂಬ ಕೇಂದ್ರ ಸರ್ಕಾರದ ಮನವಿ ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರದ ಮನವಿಯನ್ನು ತಳ್ಳಿಹಾಕಿತ್ತು. ಅಪರಾಧಿಗಳನ್ನು ಪ್ರತ್ಯೇಕ ಪ್ರತ್ಯೇಕವಾಗಿ ಗಲ್ಲಿಗೇರಿಸುವ ಪ್ರಸ್ತಾಪಕ್ಕೆ ದೆಹಲಿ ಹೈಕೋರ್ಟ್ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.