Monday, August 8, 2022

ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಲು ಸುಪ್ರೀಂ ಸೂಚನೆ

Follow Us

newsics.com
ನವದೆಹಲಿ: ಗುರುತಿನ ಪುರಾವೆಗೆ ಒತ್ತಾಯಿಸದೆ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರ ಪೂರೈಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನಾಲ್ಕು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆಯೂ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಅವಧಿಯಲ್ಲಿ ಒಣ ಪಡಿತರವನ್ನು ವಿತರಿಸಿದ ಲೈಂಗಿಕ ಕಾರ್ಯಕರ್ತೆಯರ ಸಂಖ್ಯೆಯ ವಿವರದ ಬಗ್ಗೆ ಅನುಸರಣಾ ವರದಿಯೊಂದನ್ನು ನಾಲ್ಕು ವಾರಗಳೊಳಗೆ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ, ವಿಚಾರಣೆಯನ್ನು ನಾಲ್ಕು ವಾರಗಳ ನಂತರ ನಡೆಸುವುದಾಗಿ ಸುಪ್ರೀಂ ಹೇಳಿದೆ.
ಒಣ ಪಡಿತರವನ್ನು ರಾಷ್ಟ್ರೀಯ ಏಡ್ಡ್ಸ್ ನಿಯಂತ್ರಣ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರಗಳಿಂದ ಗುರುತಿಸಲ್ಪಟ್ಟ ಎಲ್ಲ ಲೈಂಗಿಕ ಕಾರ್ಯಕರ್ತೆಯರಿಗೂ ನೀಡಬೇಕೆಂದು ಸುಪ್ರೀಂ ಹೇಳಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಣಕಾಸಿನ ನೆರವು ನೀಡಬಹುದೇ ಎಂಬ ಅಂಶದ ಬಗ್ಗೆ ನಂತರ ಕೋರ್ಟ್ ವ್ಯವಹರಿಸಲಿದೆ ಎಂದು ನ್ಯಾಯಾಧೀಶರಾದ ಎಲ್. ನಾಗೇಶ್ವರ ರಾವ್ ಮತ್ತು ಅಜಯ್ ರಾಸ್ಟೋಗಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ಕೊರೋನಾ ಕಾಯಿಲೆಯಿಂದಾಗಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಲೈಂಗಿಕ ಕಾರ್ಯಕರ್ತೆಯರಿಗೆ ಯಾವ ರೀತಿಯಲ್ಲಿ ಗುರುತಿನ ಕಾರ್ಡ್ ಮತ್ತಿತರ ಸೌಲಭ್ಯಗಳನ್ನು ವಿತರಿಸಲಾಗಿದೆ ಎಂಬುದರ ಬಗ್ಗೆ ಸಮಗ್ರ ವಿವರ ಸಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಿತು. ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ ಅರ್ಜಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡುು ಮತ್ತು ತೆಲಂಗಾಣದಲ್ಲಿ ಸರ್ವೇಯೊಂದರ ಪ್ರಕಾರ 1.2 ಲಕ್ಷ ಲೈಂಗಿಕ ಕಾರ್ಯಕರ್ತರಿದ್ದು, ಕೊರೋನಾದಿಂದಾಗಿ ಶೇ. 96 ರಷ್ಟು ಮಂದಿ ಆದಾಯದ ಮೂಲ ಕಳೆದುಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ನವೆಂಬರ್’ವರೆಗೂ ಶಾಲೆ ಆರಂಭ ಸಾಧ್ಯತೆಯೇ ಇಲ್ಲ

ರಾಜ್ಯಕ್ಕೆ ಮತ್ತೊಂದು ಚೀನಾ ವೈರಸ್; ಇಬ್ಬರಲ್ಲಿ ಸೋಂಕು ಪತ್ತೆ

ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!