Saturday, April 17, 2021

ಸುಶಾಂತ್ ಆತ್ಮಹತ್ಯೆ ಪ್ರಕರಣ; ಸುಬ್ರಹ್ಮಣಿಯನ್ ಸ್ವಾಮಿ ಎಂಟ್ರಿ

ಬೆಂಗಳೂರು: ಸುಶಾಂತ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡ ಬೆನ್ನಲ್ಲೇ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸುಶಾಂತ್ ಸಿಂಗ್‌ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಮಾಜಿ ಕೇಂದ್ರ ಸಚಿವ ಸುಬ್ರಹ್ಮಣಿಯನ್ ಸ್ವಾಮಿ ಎಂಟ್ರಿ ಕೊಟ್ಟಿದ್ದು ಕುತೂಹಲ ಮೂಡಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸೂಕ್ತವಾದ ಪ್ರಕರಣವೇ? ಪಿಐಎಲ್ ಅಥವಾ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದೇ? ಎಂಬುದನ್ನು ಪರಿಶೀಲಿಸಲು ವಕೀಲ ಇಷ್ಕಾರನ್ ಅವರನ್ನು ಕೇಳಿದ್ದೇನೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಇನ್ನೊಂದು ಟ್ವೀಟ್ ನಲ್ಲಿ ಸುಶಾಂತ್ ರಜಪೂತ್ ಪ್ರಕರಣದಲ್ಲಿ ಸಂವಿಧಾನದ 21ನೇ ವಿಧಿಯ ಐಪಿಸಿ ಸೆಕ್ಷನ್ 306, 308 ಸೆಕ್ಷನ್ ಅನ್ವಯವಾಗುತ್ತದೆಯೇ ಎಂಬುದನ್ನೂ ಇಷ್ಕಾರ್ ಪರಿಶೀಲಿಸುತ್ತಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಸುಶಾಂತ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್‌ ಕುಟುಂಬ ಹಾಗೂ ಅಭಿಮಾನಿಗಳು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದರು.
ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಸುಶಾಂತ್ ಮಾಜಿ ಪ್ರೇಯಸಿ, ಗೆಳತಿ ರಿಯಾ ಚಕ್ರವರ್ತಿ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಇದೀಗ ಸುಬ್ರಹ್ಮಣಿಯನ್ ಸ್ವಾಮಿ ಎಂಟ್ರಿ ಕೊಟ್ಟಿರೋದು ಪ್ರಕರಣಕ್ಕೊಂದು ತಾರ್ಕಿಕ ಅಂತ್ಯ ಸಿಗುವ ಭರವಸೆ ಮೂಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!