Monday, April 12, 2021

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯಲ್ಲ, ಕೊಲೆ : ಸಂಬಂಧಿಕರ ಆರೋಪ

ಪಾಟ್ನಾ: ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಅವರ ನಿಕಟ ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಯಾವುದೇ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರಲಿಲ್ಲ ಎಂದು ಅವರ ತಂಗಿ ಕೂಡ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಆರೋಪ ಮಹತ್ವ ಪಡೆದುಕೊಂಡಿದೆ. ಸುಶಾಂತ್ ಸಿಂಗ್ ರಜಪೂತ್  ಬಾಹ್ಯಾಕ್ಯಾಶ ಲೋಕದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು ಎಂಬ ಮಾಹಿತಿ ಕೂಡ ಹೊರಬರುತ್ತಿದೆ. ಈ ಮಧ್ಯೆ ಪಾಟ್ನಾದಲ್ಲಿರುವ  ಸುಶಾಂತ್ ತಂದೆ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಸಂಬಂಧಿಯಾಗಿರುವ ಬಿಜೆಪಿ ಶಾಸಕರೊಬ್ಬರು ಕೂಡ ಅವರ ಜತೆ ಮುಂಬೈಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಸುಶಾಂತ್ ಸಿಂಗ್ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!