Sunday, July 3, 2022

ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವು: ಕರಣ್ ಜೋಹರ್ ಗೆ ನೋಟಿಸ್ ಜಾರಿ

Follow Us

ಮುಂಬೈ: ಚಿತ್ರನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ವಿಚಾರಣೆ ನಡೆಸುತ್ತಿರುವ ಮುಂಬೈ ಪೊಲೀಸರು  ಖ್ಯಾತ ನಿರ್ದೇಶಕ ಕರಣ್ ಜೋಹರ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ ಸಂಸ್ಥೆಯ ಸಿಇಒ ಅಪೂರ್ವ ಮೆಹ್ತಾ ವಿಚಾರಣೆಗೆ ಹಾಜರಾಗಲಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ಬಳಿಕ ಸಾಮಾಜಿಕ ಜಾಲ ತಾಣದಲ್ಲಿ ಕರಣ್ ಜೋಹರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕರಣ್ ಜೋಹರ್ ಮತ್ತು ಅವರ ಗ್ಯಾಂಗ್ ವ್ಯವಸ್ಥಿತವಾಗಿ ಪ್ರತಿಭೆಗಳನ್ನು ಮಟ್ಟ ಹಾಕುತ್ತಿದೆ ಎಂದು ಆರೋಪಿಸಲಾಗಿತ್ತು.

ಸೋಮವಾರ ಮುಂಬೈ ಪೊಲೀಸರು ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಮಹೇಶ್ ಭಟ್ ಅವರನ್ನು ವಿಚಾರಣೆಗೆ ಗುರಿಪಡಿಸಿದ್ದರು. ಎರಡು  ಗಂಟೆ ಕಾಲ ನಡೆದ ವಿಚಾರಣೆ ಸಂದರ್ಭದಲ್ಲಿ ಮಹೇಶ್ ಭಟ್, ಸುಶಾಂತ್ ಸಿಂಗ್ ರಜಪೂತ್ ಜತೆಗಿನ ತಮ್ಮ ವ್ಯಾವಹಾರಿಕ ಸಂಬಂಧದ ಬಗ್ಗೆ ಮಾಹಿತಿ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!