ಕೊಚ್ಚಿ: ಎದೆ ನೋವಿನ ಹಿನ್ನೆಲೆಯಲ್ಲಿ ತ್ರಿಶ್ಯೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿರುವ ಚಿನ್ನದ ರಾಣಿ ಸ್ವಪ್ನಾ ಸುರೇಶ್ ಹೊಸ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸ್ವಪ್ನಾ ಸುರೇಶ್, ನರ್ಸ್ ಗಳ ಬಳಿ ಇದ್ದ ಮೊಬೈಲ್ ಫೋನ್ ಪಡೆದು ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಗಮನಕ್ಕೆ ಈ ಘಟನೆ ಬಂದಿದ್ದು, ತನಿಖೆ ನಡೆಸಲು ಸೂಚನೆ ನೀಡಲಾಗಿದೆ.
ಸ್ವಪ್ನಾ ಸುರೇಶ್ ಬಳಸುತ್ತಿದ್ದ ಎಲ್ಲ ಮೊಬೈಲ್ ಫೋನ್ ಗಳನ್ನು ತನಿಖಾಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ ಸ್ವಪ್ನಾ ಸುರೇಶ್ ಅವರನ್ನು ಮತ್ತೊಮ್ಮೆ ಕಸ್ಟಡಿಗೆ ತೆಗೆದುಕೊಳ್ಳಲು ಎನ್ ಐ ಎ ಚಿಂತನೆ ನಡೆಸಿದೆ