Tuesday, April 13, 2021

ಸ್ವಪ್ನಾ ಸುರೇಶ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಕೊಚ್ಚಿ: ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಟದ ಆರೋಪಿ ಸ್ವಪ್ನಾ ಸುರೇಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು  ಮಂಗಳವಾರಕ್ಕೆ ಮುಂದೂಡಲಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಕೇರಳ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದರು.

ಈ ಮಧ್ಯೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ನ್ಯಾಯವಾದಿ  ಅಶೋಕ್ ಮೆನೋನ್, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾದಳ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಅರ್ಜಿ ಪುರಸ್ಕರಿಸಲು ನ್ಯಾಯಾಲಯಕ್ಕೆ  ಅಧಿಕಾರ ಇಲ್ಲ ಎಂದು ವಾದ ಮಂಡಿಸಿದರು. ವಿಶೇಷ ನ್ಯಾಯಾಲಯದಲ್ಲಿ ಮಾತ್ರ ಇದರ ವಿಚಾರಣೆ ಸಾಧ್ಯ ಎಂದು ಹೇಳಿದರು.

ಇನ್ನೊಂದೆಡೆ, ಚಿನ್ನ ಕಳ್ಳ ಸಾಗಾಟ ಬೆಳಕಿಗೆ ಬಂದಿರುವ ಕಾರಣ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೇರಳದಲ್ಲಿ ಪ್ರತಿಭಟನೆ ನಡೆಸಿದರು. ಕೋಝಿಕೋಡ್ ನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಬಳಸಲಾಯಿತು

ರಾಷ್ಟ್ರೀಯ ತನಿಖಾದಳ ಇದೇ ಮೊದಲ ಬಾರಿಗೆ ಚಿನ್ನ ಕಳ್ಳ ಸಾಗಾಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ. ಈ ಮೊದಲು ಕಾಸರಗೋಡಿನಲ್ಲಿ ನಕಲಿ ನೋಟು ನೀಡಿ ಚಿನ್ನ ಖರೀದಿಸಿದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಿತ್ತು. ಆದರೆ ಈ ಪ್ರಕರಣದಲ್ಲಿ ತನಿಖೆಯ ಮೂಲ ವಿಷಯ ನಕಲಿ ಕರೆನ್ಸಿ ಜಾಲವಾಗಿತ್ತು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!