Saturday, April 17, 2021

15 ಕೋಟಿ ಚಿನ್ನ ಕಳ್ಳ ಸಾಗಾಟ: ಇಂದು ಸ್ವಪ್ನಾ ಸುರೇಶ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಕೇರಳ ಹೈಕೋರ್ಟ್ ನಲ್ಲಿ ನಡೆಯಲಿದೆ.

ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ನಾನು ನಿರಪರಾಧಿ. ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ವಪ್ನಾ ಸುರೇಶ್ ಸುದ್ದಿ ವಾಹಿನಿಗಳಿಗೆ ಕಳುಹಿಸಿರುವ ಧ್ವನಿ ಸಂದೇಶದಲ್ಲಿ ಹೇಳಿದ್ದಾರೆ. ಈ ಮಧ್ಯೆ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿ ಕೇರಳ ಹೈಕೋರ್ಟ್ ಗೆ ಮತ್ತೊಂದು ಮನವಿ ಕೂಡ ಸಲ್ಲಿಸಲಾಗಿದೆ.

ಈ ಬೆಳವಣಿಗೆ ಮಧ್ಯೆ, ಚಿನ್ನ ಕಳ್ಳ ಸಾಗಾಟ ಪ್ರಕರಣ ತನಿಖೆಯನ್ನು ಎನ್ ಐ ಎ ಕೈಗೆತ್ತಿಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ಅವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ,

ಈ ಬೆಳವಣಿಗೆ ಮಧ್ಯೆ ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ. ಇಂದು ಸಭೆ ಸೇರಲಿರುವ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಹೋರಾಟದ ಸ್ವರೂಪವನ್ನು ಅಂತಿಮಗೊಳಿಸಲಿದ್ದಾರೆ.

ಒಂದು ಬಾರಿ ಚಿನ್ನ ಕಳ್ಳ ಸಾಗಾಟ ಮಾಡಿದರೆ ಕನಿಷ್ಟ 25 ಲಕ್ಷ ರೂಪಾಯಿ  ಸ್ವಪ್ನಾ ಸುರೇಶ್ ಅವರಿಗೆ ಲಭಿಸುತ್ತಿತ್ತು ಎಂದು ಮೂಲಗಳು ಹೇಳಿವೆ. 40ಕ್ಕೂ ಹೆಚ್ಚು ಬಾರಿ ಸ್ವಪ್ನಾ ಸುರೇಶ್ ಈ ರೀತಿ ಚಿನ್ನ ಕಳ್ಳ ಸಾಗಾಟ ಮಾಡಿದ್ದಾರೆ  ಎಂದು ಶಂಕಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!