Saturday, April 17, 2021

ಸ್ವಪ್ನಾ ಸುರೇಶ್ ಇಂದು ಕೊಚ್ಚಿ ನ್ಯಾಯಾಲಯಕ್ಕೆ ಹಾಜರು

ಕೊಚ್ಚಿ: ಬೆಂಗಳೂರಿನ ಕೋರಮಂಗಲದ ಅಪಾರ್ಟ್ ಮೆಂಟ್ ವೊಂದರಲ್ಲಿ  ಬಂಧಿಸಲಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಇಂದು ಕೊಚ್ಚಿಯ  ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಸ್ವಪ್ನಾ ಮತ್ತು ಸಂದೀಪ್ ಕೇರಳದಲ್ಲಿ ರಾಜಕೀಯ ಕೋಲಾಹಲ ಸೃಷ್ಚಿಸಿರುವ 30 ಕೋಟಿ ಚಿನ್ನ ಕಳ್ಳ ಸಾಗಾಟ ಪ್ರಕರಣದ  ಪ್ರಮುಖ ಆರೋಪಿಗಳಾಗಿದ್ದಾರೆ.

ಮೂರು ದಿನಗಳ ಹಿಂದೆ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ತಮ್ಮ ಕುಟುಂಬದ ಸದಸ್ಯರ ಜತೆ ಬೆಂಗಳೂರಿಗೆ ಬಂದಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಆರಂಭದಲ್ಲಿ ಬಿಟಿಎಂ ಲೇ ಔಟ್ ನಲ್ಲಿ ವಾಸ್ತವ್ಯ ಹೂಡಿದ್ದ ಇವರು ಬಳಿಕ ಕೋರಮಂಗಲಕ್ಕೆ ಶಿಫ್ಟ್ ಆಗಿದ್ದರು ಎಂಬುದು ಇದೀಗ ತಿಳಿದು ಬಂದಿದೆ.

ಈ ಮಧ್ಯೆ ಕೇರಳದ ಮಲಪುರಂ ಜಿಲ್ಲೆಯಲ್ಲಿ ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕಸ್ಟಂಸ್ ಅಧಿಕಾರಿಗಳು  ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಶಂಕಿತ ಆರೋಪಿ, ಸ್ವಪ್ನಾ ಸುರೇಶ್ ಗಿಂತಲೂ ಹೆಚ್ಚಿನ ಪಾತ್ರ ಈ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ವಹಿಸಿದ್ದ ಎಂದು ಹೇಳಲಾಗಿದೆ.

ಈ ಮಧ್ಯೆ ಕೇರಳದಿಂದ ಬೆಂಗಳೂರಿಗೆ ತೆರಳಲು ಸ್ವಪ್ನಾ ಸುರೇಶ್ ಮತ್ತು ಇತರರಿಗೆ ಯಾರು ಸಹಾಯ ಮಾಡಿದ್ದರು ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಹಿರಿಯ ಅಧಿಕಾರಿಗಳು ಈ ಆರೋಪಿಗಳಿಗೆ ಎಲ್ಲ ಸಹಕಾರ ನೀಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!