newsics.com
ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ ಚಡ್ಡಾ ನಿನ್ನ ಜತೆ ನಾನಿದ್ದೇನೆ ಎಂದು ಸ್ವರ ಭಾಸ್ಕರ್ ಬರೆದಿದ್ದಾರೆ.
ಸ್ವರ ಭಾಸ್ಕರ್ ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸುವುದರಲ್ಲಿ ಮುಂಚೂಣಿಯಲ್ಲಿದ್ದಾರೆ.
ಕೇಂದ್ರದ ನೀತಿಗಳ ವಿರುದ್ದ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರ ವಶಪಡಿಸಲು ಸೇನೆ ಸಿದ್ದ ಎಂಬ ಸೇನಾಧಿಕಾರಿಯ ಹೇಳಿಕೆ ವಿರುದ್ಧ ರಿಚಾ ಚಡ್ಡಾ ಟ್ವೀಟ್ ಮಾಡಿದ್ದರು.