Friday, September 30, 2022

ಟಿ-20 ಸರಣಿ: ಭಾರತೀಯ ಮಹಿಳಾ ತಂಡಕ್ಕೆ ಶ್ರೀಲಂಕಾ ವಿರುದ್ಧ ಐದು ವಿಕೆಟ್ ಗಳ ಜಯ

Follow Us

newsics.com

ದಾಂಬುಲಾ: ಭಾರತೀಯ ಮಹಿಳಾ ಕ್ರಿಕೆಟ್ ತಂಡ ದಾಂಬುಲಾದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿತು.ನಾಯಕಿ ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ನೀಡಿದ ನೆರವಿನಿಂದಾಗಿ ಜಯ ಸಾಧ್ಯವಾಗಿದೆ ಎಂದು ಹೇಳಲಾಗಿದೆ.

ಉಪ ನಾಯಕಿ ಸ್ಮೃತಿ ಮಂದಾನಾ (34 ಎಸೆತಗಳಲ್ಲಿ 39) ಶೆಫಾಲಿ ವರ್ಮಾ (10 ಎಸೆತಗಳಲ್ಲಿ 17) ಎಸ್ ಮೇಘಾನಾ (10 ಎಸೆತಗಳಲ್ಲಿ 17) ರನ್ ಗಳಿಂದ ಭಾರತ ತಂಡ 19.1 ಓವರ್ ಗಳಲ್ಲಿ 126 ರನ್ ಗಳ ಗುರಿ ಬೆನ್ನಟ್ಟಲು ಸಾಧ್ಯವಾಯಿತು. ಹರ್ಮನ್ ಪ್ರೀತ್ ಕೌರ್ 32 ಎಸೆತಗಳಲ್ಲಿ 31 ರನ್ ಗಳಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಏಳು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ಅಂತಿಮ ಹಾಗೂ ಫೈನಲ್ ಪಂದ್ಯ ಜೂನ್ 27 ರಂದು ಸೋಮವಾರ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಸ್ಮೃತಿ ಮಂದಾನಾ ಟಿ-20 ಪಂದ್ಯದಲ್ಲಿ ಅತ್ಯಂತ ವೇಗವಾಗಿ 2,000 ರನ್ ಗಳಿಸಿದ ಭಾರತೀಯ ಎರಡನೇ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಗಗನದಲ್ಲೇ ಭಾರತೀಯ ಯುದ್ಧ ವಿಮಾನಗಳಿಗೆ ಇಂಧನ ಪೂರೈಸಿದ ಯುಎಇ ವಾಯುಪಡೆ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!