newsics.com
ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ.
ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್‌ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲೆಂಡ್‌ಗೆ ಮೊದಲು ಬ್ಯಾಟಿಂಗ್ ಅವಕಾಶ ಮಾಡಿಕೊಟ್ಟಿತು. ಡೆವೊನ್ ಕಾನ್ವೆ (52), ಡೇರಿಲ್ ಮಿಚೆಲ್ (59) ಆಕರ್ಷಕ ಅರ್ಧ ಶತಕದ ನೆರವಿನೊಂದಿಗೆ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದೊಂದಿಗೆ 176 ರನ್ ಸೇರಿಸಿತು.
ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ಶುಭಮನ್ ಗಿಲ್ (7), ಇಶಾನ್ ಕಿಶನ್ (4), ರಾಹುಲ್ ತ್ರಿಪಾಠಿ (0) ಒಬ್ಬರ ಹಿಂದೆ ಒಬ್ಬರು ಔಟಾದರು. ಸೂರ್ಯಕುಮಾರ್ ಯಾದವ್ 47 ರನ್ ಗಳಿಸಿದರು. ಅಂತಿಮವಾಗಿ ಭಾರತ 9 ವಿಕೆಟ್ ನಷ್ಟದೊಂದಿಗೆ 155 ರನ್ ಗಳಿಸಿ ಸೋಲು ಕಂಡಿತು.
ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ 1–0 ಅಂತರದ ಮುನ್ನಡೆ ಸಾಧಿಸಿದೆ. ಮುಂದಿನ ಪಂದ್ಯ ಭಾನುವಾರ (ಜ.29) ನಡೆಯಲಿದೆ.
ಪತ್ನಿ ಸಂಗೀತಾಗೆ ವಿಜಯ್ ಡಿವೋರ್ಸ್, ಕೀರ್ತಿ ಸುರೇಶ್ ಜೊತೆ 2ನೇ ಮದುವೆ?